Udupi

ನೇಜಾರು ಹತ್ಯಾಕಾಂಡ: ಆರೋಪಿ ಪ್ರವೀಣ್ ಕೆಲಸದಿಂದ ವಜಾ

ಮಂಗಳೂರು: ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮಕ್ಕಳನ್ನು ಅತ್ಯಂತ ಭೀಕರವಾಗಿ ಕೊಲೆಗೈದ ಆರೋಪಿ ಪ್ರವೀಣ್ ಚೌಗಲೆಯನ್ನು ವಜಾಗೊಳಿಸಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಆದೇಶಿಸಿದೆ. ಆರೋಪಿ ಪ್ರವೀಣ್ ಚೌಗಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕ್ಯಾಬಿನ್ ಕ್ರೂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ.

ಘಟನೆಯಿಂದ ತೀವ್ರ ದು:ಖವಾಗಿದ್ದು, ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡುತ್ತೇವೆ ಮತ್ತು ತನಿಖೆಗೆ ಸಹಕಾರವನ್ನೂ ನೀಡುತ್ತೇವೆ.

ಗಂಭೀರ ಪ್ರಕರಣದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button