ಕಾರು ಬೈಕ್ ಡಿಕ್ಕಿ- ಬೈಕ್ ಸವಾರ ಮೃತ್ಯು

ಬೈಕ್ ಮತ್ತು ವ್ಯಾಗನರ್ ಕಾರ್ ನಡುವೆ ಮುಖಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಕೋತೂರು ಗ್ರಾಮದ ಶಶಿ(22) ಮೃತ ಪಟ್ಟಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದಲ್ಲಿ ಘಟನೆ ವರದಿಯಾಗಿದ್ದು ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಗೋಣಿಕೊಪ್ಪಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಸಾಗಿಸುವ ಸಂದರ್ಭ ಮಾರ್ಗಮದ್ಯೆ ಕೊನೆಯುಸಿರೆಳೆದಿದ್ದಾರೆ.

ಪೊನ್ನಂಪೇಟೆ ಕಡೆಯಿಂದ ಬಾಳಲೆ ಕಡೆಗೆ ಹೋಗುತ್ತಿದ ಬೈಕ್ ಹಾಗೂ ಬಾಳಲೆ ಕಡೆಯಿಂದ ಪೊನ್ನಂಪೇಟೆ ಕಡೆಗೆ ಹೋಗುತ್ತಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದೆ.

ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories