Featured StoryKodagu

ಸಚಿವರ ಆಪ್ತಸಹಾಯಕ ಎಂದು ಹೇಳಿ 20 ಸಾವಿರ ಪಡೆದ ಆರೋಪಿಗಳ ಬಂಧನ

ಸಚಿವರ ಹೆಸರಲ್ಲಿ ಕರೆ ಮಾಡಿ ಹಣ ವಸೂಲಾತಿ ಮಾಡಿದರೆ ಹುಷಾರ್..!!

ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಸಂತೋಷ್.ಹೆಚ್.ಎನ್ ಕುಶಾಲನಗರ ತಾಲ್ಲೂಕಿನ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನವಂಬರ್ 19 ರಂದು ರಾತ್ರಿ ಸುಮಾರು 9 ಘಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ಇವರ ಮೊಬೈಲ್ಗೆ ಕರೆ ಮಾಡಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ತಾನು ಎಂದು ಹೇಳಿ ತುರ್ತಾಗಿ ರೂ. 20,000 ಗಳ ಹಣದ ಅವಶ್ಯಕತೆಯಿದ್ದು, ಗೂಗಲ್ ಪೇ ಮೂಲಕ ಕಳುಹಿಸುವಂತೆ ಹಾಗೂ ಹಣವನ್ನು ಆದಷ್ಟು ಬೇಗ ಹಿಂದಿರುಗಿಸುವುದಾಗಿ ಹೇಳಿದರು.
ಅಪರಿಚಿತ ವ್ಯಕ್ತಿಗೆ ಕಂದಾಯ ನಿರೀಕ್ಷಕರು ರೂ.20,000/- ಗಳ ಹಣವನ್ನು ಗೂಗಲ್ ಪೇ ಮೂಲಕ ಕಳುಹಿಸಿದರು.
ನಂತರ ಕಂದಾಯಾಧಿಕಾರಿ ಸಂತೋಷ್ ಈ ಕುರಿತು 20 ನೇ ತಾರೀಖಿನಂದು ಸಚಿವರ ಕಛೇರಿಯಲ್ಲಿ ವಿಚಾರಿಸಿದಾಗ ಹಣ ಕೇಳಿದ ವ್ಯಕ್ತಿ ಹಾಗೂ ಮೊಬೈಲ್ ಸಂಖ್ಯೆಗೆ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ಸಚಿವರ ಕಛೇರಿ ಮೂಲಗಳು ಸ್ಪಷ್ಟಪಡಿಸಿದವು.
ಕೂಡಲೇ ಸಂತೋಷ್ ಅವರು ಪೊಲೀಸ್ ದೂರು ನೀಡಲು ಮುಂದಾದರು. ದೂರು ಸ್ವೀಕರಿಸಿದ ಆರ್.ವಿ ಗಂಗಾಧರಪ್ಪ, ಡಿಎಸ್ಪಿ, ಸೋಮವಾರಪೇಟೆ ಉಪವಿಭಾಗ, ಪ್ರಕಾಶ್.ಬಿ.ಜಿ, ಪಿಐ ಹಾಗೂ ಗೀತಾ, ಪಿಎಸ್ಐ ಕುಶಾಲನಗರ ನಗರ ಪೊಲೀಸ್ ಠಾಣೆ, ಕಾಶಿನಾಥ ಬಗಲಿ, ಪಿಎಸ್ಐ, ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ಮತ್ತು ಸಿಬ್ಬಂದಿ ಅವರುಗಳ ತಂಡ ಘಟನೆ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಾಕ್ಷ್ಯಾಧರಗಳನ್ನು ಕಲೆಹಾಕಿ ತನಿಖೆ ಕೈಗೊಂಡಿತು.
ವಿಳಂಭರಹಿತವಾಗಿ ನವಂಬರ್ 22 ರಂದು ಆರೋಪಿಗಳಾದ ಮೈಸೂರು ನಿವಾಸಿ ರಘುನಾಥ, 34 ವರ್ಷ ಮತ್ತು ಶಿವಮೂರ್ತಿ, 35 ವರ್ಷ ಎಂಬುವವರನ್ನು ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಯಿತು.
*ವಿಶೇಷ ಸೂಚನೆ* :- ಸಚಿವರ ಆಪ್ತಸಹಾಯಕರು ಅಥವಾ ಕಛೇರಿ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎನ್.ಎಸ್. ಬೋಸರಾಜ್ ಅವರು ಕೊಡಗು ಜಿಲ್ಲಾ ಎಸ್ಪಿಗೆ ಸೂಚಿಸಿದ್ದಾರೆ.
ಸಚಿವರ ಆಪ್ತಸಹಾಯಕರು ಅಥವಾ ಕಛೇರಿ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡುವ ವ್ಯಕ್ತಿಗಳ ಕುರಿತು ಮಾಹಿತಿ ಇದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಕೋರಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದೂ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button