Manglore

ಡಿ.ಕೆ ಶಿವಕುಮಾರ್’ಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ‘CBI ತನಿಖೆ ವಾಪಸ್’​ಗೆ ನಿರ್ಧಾರ

ಮಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಲು ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಆದ್ರೇ ಇಂತಹ ಸಿಬಿಐ ತನಿಖೆಗೆ ಒಪ್ಪಿಗೆ ಸೂಚಿಸಿದ್ದನ್ನು ಹಿಂಪಡೆಯಲು ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದು ವಿಶೇಷವಾಗಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಇತರರ ವಿರುದ್ಧ ತನಿಖೆ ನಡೆಸಲು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐಗೆ ಹಸ್ತಾಂತರಿಸಿದ್ದ ಪ್ರಕರಣದ ಬಗ್ಗೆ ಮಹತ್ವದ ಚರ್ಚೆ ನಡೆಸಿತು.

ಗೃಹ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿದ್ದಂತ ಪ್ರಸ್ತಾವನೆ ಹಾಗೂ ರಾಜ್ಯ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವೆಂಬರ್.21, 2023ರಲ್ಲಿ ನೀಡಿರುವ 28 ಪುಟಗಳ ಅಭಿಪ್ರಾಯದ ಕಡತದ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ಹಿಂಪಡೆದು, ಕರ್ನಾಟಕ ಪೊಲೀಸ್ ಇಲಾಖೆ ಅಥವಾ ಲೋಕಾಯುಕ್ತ ಪೊಲೀಸ್ ತನಿಖೆಗೆ ಹಸ್ತಾಂತರಿಸುವ ಬಗ್ಗೆ ಗೃಹ ಇಲಾಖೆಯಿಂದ ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.

ಗೃಹ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿದ್ದಂತ ಪ್ರಸ್ತಾವನೆ ಹಾಗೂ ರಾಜ್ಯ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವೆಂಬರ್.21, 2023ರಲ್ಲಿ ನೀಡಿರುವ 28 ಪುಟಗಳ ಅಭಿಪ್ರಾಯದ ಕಡತದ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button