
Dharwad
ಧಾರವಾಡ್: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು
ಧಾರವಾಡ :ಧಾರವಾಡದಲ್ಲಿ ಕ್ರಿಕೆಟ್ ಆಡಲು ಹೋದ ಬಾಲಕನೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಾಲಕನನ್ನು ಶ್ರೇಯಸ್ ಶಿನ್ನೂರ (16)ಎಂದು ಗುರುತಿಸಲಾಗಿದೆ.ಬಾಲಕ ತನ್ನ ಗೆಳೆಯರ ಜೊತೆ ಮನೆಯ ಟೆರೇಸ್ ನಲ್ಲಿ ಕ್ರಿಕೆಟ್ ಆಡುವಾಗ ಬಾಲ್ ಕ್ಯಾಚ್ ಹಿಡಿಯಲು ಹೋಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ.
ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ತಾಯಿ ಹಾಗೂ 9 ತಿಂಗಳ ಮಗು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಜೀವ ದಹನವಾಗಿದ್ದರು.




