
Kodagu
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ ಆಗಮನ
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ ಭೇಟಿ ನೀಡಿದ್ದಾರೆ
ಮಡಿಕೇರಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಹೆಚ್.ಡಿ.ಕುಮಾರಸ್ವಾಮಿ,ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಮಡಿಕೇರಿಗೆ ಆಗಮಿಸಿದ್ದಾರೆ.
ಅನಿತಾ ಕುಮಾರಸ್ವಾಮಿ, ಮಾಜಿ ಶಾಸಕ ಸಾ.ರಾ.ಮಹೇಶ್ ಜತೆಗೆ ಅಗಮಿಸಿರುವ ಕುಮಾರಸ್ವಾಮಿ
ಮಂಗಳವಾರ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇದೆ.
ಕೊಡಗಿನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೆರವಾಗಿರುವ ಹಿನ್ನೆಲೆ, ನೂತನ ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆ ರಾಜಕೀಯಾಸಕ್ತರಲ್ಲಿ ಮನೆಮಾಡಿದ ಕುತೂಹಲ ತೆರೆ ಬೀಳುವ ಸಾಧ್ಯತೆ ಕಂಡು ಬಂದಿದೆ.




