
Featured StoryClimate and environment
ಡಿಸೆಂಬರ್ 3 ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ
ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ಡಿ.3 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎದ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.




