Crime

ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ, ಡಿ.02: ಮಕ್ಕಳಾಗಿಲ್ಲವೆಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನಡೆದಿದೆ. ಸವಿತಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 12 ವರ್ಷದ ಹಿಂದೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರೆಗೂಡು ಗ್ರಾಮದ ರವಿಕುಮಾರ್ ಎಂಬುವವರ ಜೊತೆ ಮದುವೆಯಾಗಿತ್ತು. ಇನ್ನು ಕಳೆದ ಎರಡು ವರ್ಷಗಳಿಂದ ನೆಲಮಂಗಲದಲ್ಲಿ ದಂಪತಿ ವಾಸವಿದ್ದರು.

ಇನ್ನು 12 ವರ್ಷವಾದರೂ ಮಕ್ಕಳಾಗಿಲ್ಲವೆಂಬ ಕೊರಗು ಹೊಂದಿದ್ದ ಗೃಹಿಣಿ ಸವಿತಾ, ಪತಿ ಬಳಿ ಮಕ್ಕಳಿಲ್ಲದ ವಿಷಯ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದ ಅವರು, ಇಂದು(ಡಿ.02) ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಬಾರಿ ಪತ್ನಿಗೆ ಪೋನ್ ಮಾಡಿದರೂ ಕರೆ ಸ್ವೀಕರಿಸದ ಹಿನ್ನಲೆ ಮನೆ ಬಳಿ ಬಂದು ಹುಡುಕುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button