
Tumkur
ತುಮಕೂರು :ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ;
ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ಈ ಅಪಘಾತ ಸಂಭವಿಸಿದೆ. ಹರೀಶ್ (21)ಎಂಬುವವರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದ ದೊಮ್ಮನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರ ಹರೀಶ್ ಮೇಲೆ ಹರಿದಿದೆ. ಪರಿಣಾಮ ಅಪಘಾತದ ಭೀಕರತೆಗೆ ಹರೀಶ್ ದೇಹ ಎರಡು ತುಂಡಾಗಿ ಬಿದ್ದಿದೆ.




