Crime

ಯೋಜನೆಗಳ ಲಾಭ ಪಡೆಯಲು ಎಸಿ ರಾಜಶೇಖರ ಡಂಬಳ ಕರೆ

ರಾಯಚೂರು,ಸೆ30:- ಪುರಷರಷ್ಟೇ ಮಹಿಳೆಯರೂ ಕೂಡ ಸಬಲರಾಗಿದ್ದು, ಮಹಿಳೆಯರ ಏಳಿಗೆಗಾಗಿ ಸರ್ಕಾರ ರೂಪಿಸಿದ ಯೋಜನೆಗಳ ಸದುಯೋಗ ಪಡೆದುಕೊಂಡು, ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಲಿಂಗಸುಗೂರು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರು ಕರೆ ನೀಡಿದರು.
ಅವರು ಸೆ. 29ರ ಮಂಗಳವಾರ ಲಿಂಗಸುಗೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ದಮನಿತ ಮಹಿಳೆಯರಿಗೆ ಚೇತನಾ ಯೋಜನೆಯಡಿ ದಮನಿತ ಮಹಿಳೆಯರು ಸ್ವಯಂ ಉದ್ದೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸೀಡಕಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಸೇವಾ ಸಂಸ್ಥೆಗಳು, ಸಹಾಕಾರ ಬ್ಯಾಂಕುಗಳು, ರಾಷ್ಟ್ರೀಯ ಬ್ಯಾಂಕುಗಳು ಕೀರುಸಾಲ ಯೋಜನೆಯಡಿ ಸಾಲ ಸೌಲಭ್ಯಗಳು ನೀಡುತ್ತಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ಬೆಳೆದಿಂಗಳು ಸಂಸ್ಥೆಯ ಜಿಲ್ಲಾ ಅಧ್ಯಕ್ಷೆ ಹುಲಿಗೆಮ್ಮ ಮಾತನಾಡಿ, ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಈಗಾಗಲೇ 600 ಕ್ಕಿಂತ ಹೆಚ್ಚು ದಮನಿತ ಮಹಿಳೆಯರಿಗೆ ಸಾಲ ಮತ್ತು ಸಹಾಯ ಧನ ಸೌಲಭ್ಯ ಕಲ್ಪಿಸಲಾಗಿದೆ. ಕೋವಿಡ್-19 ಸಮಯದಲ್ಲಿ ಆಹಾರದ ಕಿಟ್‍ಗಳನ್ನು ನೀಡಲಾಗಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಲ್.ಎನ್ ಲಿಂಗನಗೌಡ್ರ ನಾಗರಾಜ ಗೌಡ ಮಾತನಾಡಿ, ಸಮಾಜದಲ್ಲಿ ತುಳಿತಕ್ಕೊಳಗಾದ ನೊಂದ ಮಹಿಳೆಯರಿಗೆ ನಿಗಮದಿಂದ 50,000 ರೂ.ಗಳ ಸಾಲ ಮತ್ತು 50,000 ರೂಗಳ ಸಹಾಯಧನ ಒಟ್ಟು 1,00,000 ರೂಪಾಯಿಗಳನ್ನು ಮಂಜೂರು ಮಾಡಲಾಗುತ್ತಿದೆ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಲಿಂಗಸುಗೂರು ತಾಲೂಕಿನ ತಹಶಿಲ್ದಾರರಾದ ಚಾಮರಾಜ ಪಾಟೀಲ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ್ ಮತ್ತು ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟಗಳ ಜಿಲ್ಲಾ ಅಧ್ಯಕ್ಷೆ ಶರಣಮ್ಮ ಹೂನುರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾಧಿಕಾರಿಗಳು ಪ್ರಸ್ತಾವಿಕವಾಗಿ ಮತನಾಡಿದರು. ಯೋಜನಾ ಅನುಷ್ಠಾನ ಅಧಿಕಾರಿ ಭಾರತಿ ವಂದಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button