Featured StoryDakshina Kannada

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಬ್ಬರ ಬಂಧನ

ಮಂಗಳೂರು: 2016ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಖೋಟ ನೋಟು ಪ್ರಕರಣದಲ್ಲಿ, ನ್ಯಾಯಾಲಯಕ್ಕೆ ಹಾಜರಾಗದೇ ಆಸ್ತಿ ಜಪ್ತಿ ವಾರಂಟ್ ಹೊರಡಿಸಿದ್ದರೂ ಪತ್ತೆಯಾಗದ ಇಬ್ಬರು ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಮೋಹನ ಕುಮಾರ್ ಮತ್ತು ಕೆಂಪರಾಜ್ ಬಂಧಿತರು.

ಇವರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ 2016ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಅವರಿಬ್ಬರೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದರು.

ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಡಿಸೆಂಬರ್ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button