Udupi

ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ : ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button