
Featured StoryClimate and environmentState News
ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ – ಈ ಭಾಗಗಳಲ್ಲಿ ಮಳೆ ಸಾಧ್ಯತೆ
ಐಎಂಡಿ ಪ್ರಕಾರ, ದೇಶದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ನ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಇಂದಿನಿಂದ ಮೂರು ದಿನ ರಾಜ್ಯದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸಂದೇಶ ರವಾನಿಸಿದೆ.
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಆಂಧ್ರಪ್ರದೇಶದ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.




