Featured StoryNational

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಕುರಿತು ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂಕೋರ್ಟ್‌!

ಭಾರೀ ಕುತೂಹಲ ಮೂಡಿಸಿದ್ದ ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ (J&K Special Status) ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಸಂಬಂಧ ಇಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಜಮ್ಮು ಕಾಶ್ಮೀರದಲ್ಲಿ ವಿಧಿ 370 ತಾತ್ಕಲಿಕ ವಿಧಿಯಾಗಿತ್ತು ಎಂದು ಹೇಳಿದೆ.

ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರವನ್ನು ಕೈಗೊಳ್ಳಬಹುದು. ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ರಾಷ್ಟ್ರಪತಿಗಳ ಅಧಿಕಾರಕ್ಕೂ ಕೂಡ ಮಿತಿಗಳು ಇರುತ್ತದೆ. ರಾಷ್ಟ್ರಪತಿ ಕೈಗೊಳ್ಳುವ ನಿರ್ಧಾರಗಳು ನ್ಯಾಯಾಂಗದ ಪರಾಮರ್ಶಗೆ ಒಳಪಡಲಿದೆ ಎಂದು ಹೇಳಿದರು.

ಸೆ.30 2024 ರ ಒಳಗೆ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಮ್ ಕೋರ್ಟ್ ಚುನಾವಣೆ ಆಯೋಗಕ್ಲೆ ಈ ಸಂದರ್ಭದಲ್ಲಿ ಸೂಚನೆ ನೀಡಿದೆ.

ಲಡಾಕ್ ಕೇಂದ್ರಾಡಳಿತವಾಗಿಸುವ ಕ್ರಮಕ್ಕೆ ಸುಪ್ರೀಮ್ ಕೋರ್ಟ್ ಈ ಸಂದರ್ಭದಲ್ಲಿ ಅನುಮತಿಸಿ ಆದೇಶಿಸಿದೆ.

ಒಟ್ಟಿನಲ್ಲಿ ಸುಪ್ರೀಮ್ ಕೋರ್ಟ್ ಅರ್ಟಿಕಲ್ 370 ರದ್ಧತಿಯನ್ನು ಎತ್ತಿ ಹಿಡಿದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button