Bengaluru Urban

ರಾಯಚೂರು :ಆಹಾರ ಸೇವಿಸಿ 10ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು : ಬಾಲಕಿಯರ ವಸತಿ ನಿಲಯದಲ್ಲಿ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಥವಾ ಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಜಿಲ್ಲೆಯ ಮಾನವಿ ಪಟ್ಟಣದ ಫಾತಿಮಾ ನಗರದಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನ ವಿದ್ಯಾರ್ಥಿನಿಯರಿಗೆ ಊಟವಾಗಿ ಪಲಾವ್ ಅನ್ನ, ಟೊಮೆಟೋ ಚಟ್ಟಿ ಹಾಗೂ ಮೊಟ್ಟೆ ನೀಡಿದ್ದರು. ಇದನ್ನು ವಿದ್ಯಾರ್ಥಿನಿಯರು ಸೇವಿಸಿದ್ದಾರೆ. ಆದರೆ ಸಂಜೆ ವೇಳೆಗೆ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ-ಬೇದಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡು ಬಳಲಿದ್ದಾರೆ.

ಘಟನೆಗೆ ಹಾಸ್ಟೆಲ್‌ ವಾರ್ಡನ್ ಅವರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ ಆರೋಪಿಸಿರುವ ಮಕ್ಕಳ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಸತಿ ನಿಲಯಗಳಲ್ಲಿ ಈ ರೀತಿಯ ಘಟನೆಗಳು ಹೊಸತೇನಲ್ಲ. ಆಗಾಗ್ಗೆ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button