
ಹದೆಗೆಟ್ಟ ರಸ್ತೆ ಸುಗಮ ಸಂಚಾರಕ್ಕೆ ಅಡೆತಡೆ
ಬೀದರ್ : ಬೆಳಕುಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ 5 ಕೀ ಮೀ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್ ಜಿಲ್ಲೆ ಔರಾದ್ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ಪಟ್ಟಣಕೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಹಲವು ಬೈಕ್ ಸವಾರರು ಆಯಾ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಈಗಲಾದರೂ ಸಂಭಂದಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮಸ್ಥ ಬಾಲಾಜಿ ಪಾಟೀಲ್ ಮಾತನಾಡಿ, “ಹಲವು ವರ್ಷಗಳಿಂದ ರಸ್ತೆ ಕಿತ್ತು ಬಂದಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳೂ ಇತ್ತ ಗಮನಹರಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಳಕುಣಿ ಗ್ರಾಮದವರೆಗೆ ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಆಗ್ರಹಿಸಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಲೋಕೋಪಯೋಗಿ ಇಲಾಖೆ ಯ ಅಧಿಕಾರಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಮುಂದಿನ ಕೆಲವೇ ದಿನಗಳಲ್ಲಿ ರಸ್ತೆ ಸಮಸ್ಯೆ ಬಗ್ಗೆಹರಿಸಲಾಗುವುದು ಎಂದರು.




