
Crime
ಕಾಟೆಗುಡ್ಡದಲ್ಲಿ ಪೋಷಣ ಅಭಿಯಾನ ಮಾಸಾಚರಣೆ
ಬಳ್ಳಾರಿ,ಸೆ.30: ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ಯಶ್ವಸಿನಿ ಮಹಿಳಾ ಸಂಘದ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಕಾಟೆಗುಡ್ಡದ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಯಾದ ಯಶೋಧ ಮತ್ತು ನಾಗವೇಣಿ, ಆಶಾ ಕಾರ್ಯಕರ್ತೆಯಾದ ಲಲಿತಾ, ರಾಭಿಯಾ, ಯಶ್ವಸಿನಿ ಮಹಿಳಾ ಸಂಘದ ಅಧ್ಯಕ್ಷರಾದ ವಿ.ಅಂಜಲಿ ಅವರು ಮನೆಮನೆಗೆ ಭೇಟಿ ನೀಡಿ ಗರ್ಬಿಣಿ ಸ್ತ್ರೀಯರಿಗೆ ಪೌಷ್ಟಿಕಾಂಶ ಅಹಾರಗಳಾದ ಹಣ್ಣು, ತರಕಾರಿ, ಹಾಲು, ಮೊಟ್ಟೆ, ಮಾಂಸ, ಮೀನು ಇತ್ಯಾದಿಗಳನ್ನು ಬಳಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಧ್ಯಾನ, ಯೋಗ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೋಡಗಿಕೊಳ್ಳುವುದು ಬಹುಮುಖ್ಯ ಎಂದು ಆರೋಗ್ಯದ ಬಗ್ಗೆ ಸಲಹೆ ನೀಡಿದರು.




