Mumbai

ಖ್ಯಾತ ಚಲನಚಿತ್ರ ವಿಮರ್ಶಕ ‘ತರಣ್ ಆದರ್ಶ್’ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಮುಂಬೈ: ಜನಪ್ರಿಯ ಚಲನಚಿತ್ರ ವ್ಯಾಪಾರ ವಿಶ್ಲೇಷಕ ಮತ್ತು ವಿಮರ್ಶಕ ತರಣ್ ಆದರ್ಶ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತಂತೆ ಕಮಾಲ್ ಆರ್ ಖಾನ್ ಅವರು ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಚಲನಚಿತ್ರ ವಿಮರ್ಶಕ ತರುಣ್ ಆದರ್ಶ್ ಅವರು ಅನಾರೋಗ್ಯದ ಕಾರಣ, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.ಕಳೆದ ಒಂದು ವಾರದಿಂದ ತರುಣ್ ಆದರ್ಶ್ ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಈಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಯವಿಟ್ಟು ಅವರು ಗುಣಮುಖರಾಗಲಿ ಅಂತ ಪ್ರಾರ್ಥಿಸಿ ಎಂಬುದಾಗಿ ಮನವಿ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button