
Bengaluru UrbanFeatured Story
ಬೆಂಗಳೂರು :ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮೂವರು ಗಂಭೀರ
ಬೆಂಗಳೂರು: ಚಳಿಸುತ್ತಿದ್ದಂತ ಆಟೋ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ, ಆಟೋದಲ್ಲಿದ್ದಂತ ಮೂವರು ಗಾಯಗೊಂಡಿರುವಂತ ಘಟನೆ ಬೆಂಗಳೂರಿನ ಸರ್ಕಲ್ ಮಾರಿಯಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ.
ಈ ದಾರಿಯಲ್ಲೇ ಆಟೋವೊಂದು ಹಾದು ಹೋಗುತ್ತಿದ್ದಂತ ಸಂದರ್ಭದಲ್ಲಿ ಸರ್ಕಲ್ ಮಾರಿಯಮ್ಮ ದೇವಸ್ಥಾನ ಬಳಿ ಮರ ಉರುಳಿ ಬಿದ್ದಿದೆ. ಇದರಿಂದಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದಂತ ಇಬ್ಬರು ಹಾಗೂ ಚಾಲಕ ಗಾಯಗೊಂಡಿದ್ದಾನೆ. ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.




