
Manglore
ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು:ಹೊಸ ವರ್ಷಾಚರಣೆಗೆ ಈ ಬಾರಿ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕರೊನಾ ಉಪ ತಳಿಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯೆ ಈ ಕೊರೊನಾ ಅಪಾಯಕಾರಿ ಅಲ್ಲ ಎಂದು ಹೇಳಿದೆ.ಆದರೂ ನಾವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಒಳ್ಳೆಯದು. ಸಾರ್ವಜನಿಕ ಜನಜಂಗುಳಿ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೂಕ್ತ.ಆದರೆ ಅದು ಕಡ್ಡಾಯವಲ್ಲ ” ಎಂದು ಸಚಿವರು ಹೇಳಿದರು.
ಮೈಸೂರು ಉಡುಪಿಯಲ್ಲಿ ಕೊವಿಡ್ ಟೆಸ್ಟಿಂಗ್ ಜಾಸ್ತಿ ಮಾಡಲಾಗಿದೆ.ದಿನಕ್ಕೆ ಐದು ಸಾವಿರ ಟೆಸ್ಟಿಂಗ್ ಗುರಿ ಇಡಲಾಗಿದೆ ” ಎಂದು ಸಚಿವರು ಹೇಳಿದರು.




