
Haveri
ಪ್ರವಾಸಕ್ಕೆ ತೆರಳಿದ್ದ ಕೆ. ಎಸ್ ಆರ್ . ಟಿ. ಸಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಹಾವೇರಿ : ಶಾಲಾ ಬಸ್ ಪ್ರವಾಸದ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ನಡೆದಿದೆ.
ವೇಗವಾಗಿ ಬಂದ ಕೆ.ಎಸ್. ಆರ್. ಟಿ. ಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳುಗಳನ್ನು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸವಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




