Tumakuru

ತುಮಕೂರು: ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಅಂತ್ಯಸಂಸ್ಕಾರ ಮಾಡಿದ ಕುಟುಂಬಸ್ಥರು

ತುಮಕೂರು:ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಶವದ ಅಂತ್ಯ ಸಂಸ್ಕಾರ ಮಾಡಿದ ಆಘಾತಕಾರಿ ಘಟನೆ ತುಮಕೂರಿನ ದುರ್ಗದ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಟುಂಬದಸ್ಥರು ಸಾರ್ವಜನಿಕ ಸ್ಮಶಾನವಿಲ್ಲದೆ ಶವದ ಅಂತ್ಯಕ್ರಿಯೆಯನ್ನು ರಸ್ತೆ ಬದಿಯಲ್ಲಿ ಮಾಡಿದ್ದಾರೆ.

ತಿಮ್ಮನಾಯಕನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಬದಿಯೇ ಮಗ ತನ್ನ ತಂದೆಯ ಅಂತ್ಯ ಸಂಸ್ಕಾರ ಮಾಡಿದ್ದು ವಿಷಯ ತಿಳಿಯುತ್ತಿದ್ದಂತಯೇ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ತಿಮ್ಮರಾಜುರವರ ತಂದೆ ಪೆದ್ದಯ್ಯ ಎಂಬುವರು ಮೃತಪಟ್ಟಿದ್ದರು.ದುರ್ಗದಹಳ್ಳಿ ಗ್ರಾಮಕ್ಕೆ ಸ್ಮಶಾನ ಮಂಜೂರು ಮಾಡಿಕೊಡುವಂತೆ ಹಲವು ಬಾರಿ ಮನವಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಸ್ಮಶಾನಕ್ಕೆ ಜಾಗ ಮಂಜೂರು ಮಾಡದ ಹಿನ್ನೆಲೆ ರಸ್ತೆ ಬದಿಯೇ ಅಂತ್ಯಕ್ರಿಯೆ ಮಾಡಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button