Featured StoryState News

BIDAR EXCLUSIVE | ಆರ್ಯ ಈಡಿಗ ಸಮಾಜದ ವಿವಿಧ ಬೇಡಿಕೆ ಈಡೇರಿಸುವಂಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಬೀದರ್ : ರಾಜ್ಯದಲ್ಲಿ ಆರ್ಯ ಈಡಿಗ ಸಮಾಜವನ್ನ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಸಮಾಜದ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರಣವಾನಂದ ಸ್ವಾಮೀಜಿ‌ ನೇತೃತ್ವದಲ್ಲಿ ಬೀದರ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಶಿವಾಜಿ ವೃತ್ತದ ಬಳಿಯ ಉಸ್ತುವಾರಿ ಸಚಿವರ ಕಚೇರಿ‌ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ಸರಕಾರಕ್ಕೆ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು..

ಈ ವೇಳೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ ಸಿದ್ದರಾಮಯ್ಯ ‌ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್ಯ ಈಡಿಗ ಸಮಾಜವನ್ನ ಕಡೆಗಣಿಸಿದ್ದು, ಈಡಿಗ ಸಮಾಜದ ಒಬ್ಬರಿಗೆ ಮಾತ್ರ ಮಂತ್ರಿ ಸ್ಥಾನ ನೀಡಿದ್ದಾರೆ‌. ಸಮಾಜದ ಏಳಿಗೆಗಾಗಿ ಮುಂದಿನ ಬಜೆಟ್‌ನಲ್ಲಿ 500 ಕೋಟಿ ಮೀಸಲಿಡಬೇಕು. ನಮ್ಮ ಸಮಾಜದ 16 ಬೇಡಿಕೆಗಳಿದ್ದು, ಅದರಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆಗಳನ್ನ ಈಡೇಸಬೇಕು. ಇಲ್ಲದಿದ್ರೆ ಮಾರ್ಚ ತಿಂಗಳಲ್ಲಿ ಬಸವಕಲ್ಯಾಣ ಬೆಟಬಾಲಕುಂದಾ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ ಮಾಡ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದರು.

THG ಬೀದರ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button