Featured StoryState News

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ‘ರಿಂದ ಭಾರತದ ಸಂವಿಧಾನಿಕ ಕಾನೂನುಗಳನ್ನು ಉಲ್ಲಂಘಿಸುವ ಕೃತ್ಯ – ಸಹಬಾಳ್ವೆ ಉಡುಪಿ ಜಿಲ್ಲೆ

ಉಡುಪಿ, ಡಿ.28: ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭಾರತದ ಸಂವಿಧಾನಿಕ ಕಾನೂನುಗಳನ್ನು ಉಲ್ಲಂಘಿಸುವ ಕೃತ್ಯಗಳನ್ನು ಎಸಗಿದ್ದಾರೆ ಎಂದು ಸಹಬಾಳ್ವೆ ಉಡುಪಿ ಜಿಲ್ಲೆ ಆರೋಪಿಸಿದೆ.

ಮುಸ್ಲಿಮ್ ಮಹಿಳೆಯರೂ ಸೇರಿದಂತೆ ಭಾರತದ ಮಹಿಳೆಯರನ್ನು ಹೀನಾಯವಾಗಿ ಅವಮಾನಿಸುವಂತಹ ಮಾತುಗಳನ್ನು ಆಡಿದ್ದಾರೆ. ಅಲ್ಪ ಸಂಖ್ಯಾತ ಸಮುದಾಯದ ವಿರುದ್ಧ ದ್ವೇಷವನ್ನು ಪ್ರಚೋಧಿಸುವ ಸಲುವಾಗಿ ವಾಸ್ತವಕ್ಕೆ ದೂರವಾದ ಕಲ್ಪಿತ ವಿಚಾರಗಳನ್ನು ಉದ್ರೇಕಕಾರಕವಾಗಿ ಹರಿ ಬಿಟ್ಟಿದ್ದಾರೆ. ಸಂವಿಧಾನಿಕ ಅಧಿಕಾರ ವಹಿಸಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಗಳನ್ನು ಮೇಲೆ ಸುಳ್ಳು ಆರೋಪಗಳ ಮೂಲಕ ದೂಷಣೆ ಮಾಡಿದ್ದಾರೆ. ದೇಶದ ಸರ್ವೋಚ್ಛ ನ್ಯಾಯಾಲಯವನ್ನು ತುಚ್ಛೀಕರಿಸುವ ಅಸಂವಿಧಾನಿಕ ದೂಷಣೆ ಮಾಡಿದ್ದಾರೆ ಎಂದು ಸಹಬಾಳ್ವೆ ದೂರಿದೆ.

ಕರ್ನಾಟಕ ರಾಜ್ಯ ಪೋಲಿಸು ವರಿಷ್ಠಾಧಿಕಾರಿಗಳು, ಈ ಸಂವಿಧಾನ ಬಾಹಿರ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಶಾಂತಿ ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಠಿಣ ಕ್ರಮವನ್ನು ಸ್ವವಿವೇಚನೆಯಿಂದ ಜರುಗಿಸಬೇಕು ಎಂದು ಸಹಬಾಳ್ವೆ ಪ್ರಧಾನ ಸಂಚಾಲಕ ಕೆ.ಫಣಿರಾಜ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button