
Featured StoryState NewsUdupi
ನೇಜಾರು ಕೊಲೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ – ಡಿ. 30 ಕ್ಕೆ ಆದೇಶ
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತುಮೂವರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದ್ದು ವಾದ ಪ್ರತಿವಾದ ಆಲಿಸಿದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ.
ಅರ್ಜಿ ಕುರಿತ ಅಂತಿಮ ಆದೇಶವನ್ನು ಡಿ.30 ರದ್ದು ನ್ಯಾಯಾಲಯ ನೀಡಲಿದೆ. ಡಿಸೆಂಬರ್ 14 ರಂದು ಆರೋಪಿ ನ್ಯಾಯಾಲಯದಲ್ಲಿ ವಕೀಲ ಕೆ.ಎಸ್.ಎನ್ ರಾಜೇಶ್ ಅವರ ಮುಖೇನ ನ್ಯಾಯಾಲಯಕ್ಕೆ ಸಲ್ಲಿಸಿದ್ದನು.
ನೇಜಾರು ಕೊಲೆ ಪ್ರಕರಣ ಇಡೀ ದೇಶದಾದ್ಯಂತ ಸುದ್ದಿ ಮಾಡಿತ್ತು. ಈ ಪ್ರಕರಣದಲ್ಲಿ ತಾಯಿ ಮತ್ತು ಇಬ್ಬರು ಯುವತಿಯರು ಸೇರಿದಂತೆ ಒರ್ವ ಬಾಲಕನನ್ನು ಆರೋಪಿ ಅಮಾನುಷವಾಗಿ ಹತ್ಯೆ ಮಾಡಿದ್ದ.




