Featured StoryState News

ನಾರಾಯಣಗೌಡರ ಬಿಡುಗಡೆಗೆ ಕರವೇ ಕಾರ್ಯಕರ್ತರ ಒತ್ತಾಯ

ಔರಾದ : ಕನ್ನಡ ಭಾಷೆ ರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರನ್ನು ಬಿಡುಗಡೆಗೊಳಿಸಬೇಕು ಎಂದು ತಾಲ್ಲೂಕು ಕರವೇ ಅಧ್ಯಕ್ಷ ಅನಿಲ್ ಬೇಲುರೆ ಯುವ ಘಟಕದ ಅಧ್ಯಕ್ಷ ಅಮಿತ್ ಶಿವಪೂಜೆ, ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ್ ಎಡವೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕನ್ನಡ ಭಾಷೆಯೇ ಪ್ರಧಾನವಾಗಬೇಕು. ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಅಂಗಡಿ, ಮಳಿಗೆ, ಹೋಟೆಲ್, ಮಾಲ್, ಥಿಯೇಟರ್,ಕಂಪನಿ ಸೇರಿ ಇತ್ಯಾದಿ ಕಡೆಗಳಲ್ಲಿ ಶೇ 60ರಷ್ಟು ಕನ್ನಡದಲ್ಲಿಯೇ ಬರೆಯಿಸಿ ನಾಮಫಲಕ ಅಳವಡಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಬಹುತೇಕರು ನಿಯಮ ಉಲ್ಲಂಘಿಸಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ್ದಾರೆ.

ಇದರ ವಿರುದ್ಧ ಕರವೇ ರಾಜ್ಯಾಧ್ಯಕ್ಷ ಟಿ.ಎ.
ನಾರಾಯಣಗೌಡ ಅವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಅವರನ್ನು ಏಕಾಏಕಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವುದು ಸರಿಯಲ್ಲ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button