
Featured StoryUdupi
ಉಡುಪಿ: ಜಯಲಕ್ಷ್ಮೀ ಸಿಲ್ಕ್ನಲ್ಲಿ ಮಿಸ್ ಫೈರಿಂಗ್: ಓರ್ವ ಸಿಬ್ಬಂದಿಗೆ ಗಾಯ
ಉಡುಪಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ನಲ್ಲಿ ಇಂದು ಮಧ್ಯಾಹ್ನ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ.
ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ.




