
ಗುಣಮಟ್ಟದ ಟ್ಯಾಬ್, ಸಮಗ್ರ ಕಲಿಕಾ ವ್ಯವಸ್ಥೆ; ಡಿಜಿಟಲ್ ಕಲಿಕೆಗೆ ಪ್ರೋತ್ಸಾಹ, 2500 ಸ್ಮಾರ್ಟ್ಕ್ಲಾಸ್ !
ಬೆಂಗಳೂರು: ಕೊವಿಡೋತ್ತರ ಕಾಲದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ಕ್ಲಾಸ್ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.
ಬೆಂಗಳೂರು ಕಲಾ ಕಾಲೇಜ್ನಲ್ಲಿ ಗುರುವಾರ ನೂತನ ಜಿಮ್ ಹೌಸ್ ಹಾಗೂ ವಾರ್ಷಿಕ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಕಾರಣಕ್ಕೆ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್ಕ್ಲಾಸ್ ರೂಂ ಪರಿಕಲ್ಪನೆಯನ್ನು ರೂಪಿಸಲಾಗಿದೆ ಎಂದರು.
2,500 ತರಗತಿ ಕೊಠಡಿಗಳು ಸ್ಮಾರ್ಟ್ ಕ್ಲಾಸ್ಗಳು ಆದ ನಂತರ ಮುಂಬರುವ 6 ತಿಂಗಳಲ್ಲಿ ಇನ್ನೂ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ಕ್ಲಾಸ್ ರೂಮುಗಳಾಗಿ ರೂಪಿಸಲಾಗುವುದು ಎಂದರು.
ಹೈಸ್ಪೀಡ್ ಇಂಟರ್ನೆಟ್, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್ಕ್ಲಾಸ್ ರೂಂ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ಮಾಡಲಾಗಿರುವ ಸಮಗ್ರ ಕಲಿಕಾ ವ್ಯವಸ್ಥೆಯು ಕ್ರಾಂತಿಕಾರಕ. ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮದೇ ಮಾನವ ಸಂಪನ್ಮೂಲ ಬಳಸಿಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲೇ ಇದ್ದರೂ ಟ್ಯಾಬ್ ಮತ್ತು ಇಂಟರ್ನೆಟ್ ಇದ್ದರೆ ಕಲಿಯಬಹುದು. ಜತೆಗೆ, ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್ ಮಾಡಬಹುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಈ ಎಲ್ಲ ಉಪಕ್ರಮಗಳ ಮೂಲಕ ಸರಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೆÇೀಟಿ ನಡೆಸಲು ಸಜ್ಜಾಗುತ್ತಿವೆ. ಅದಕ್ಕೆ ಅಗತ್ಯವಾದ ಎಲ್ಲ ಉಪ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ತದ ನಂತರ ವಿದ್ಯಾರ್ಥಿಗಳು ಪೂರ್ವ ನಿಗದಿ ಮಾಡಿದ ಪಠ್ಯ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಇದೇ ವೇಳೆ ಡಿಸಿಎಂ ಪ್ರಕಟಿಸಿದರು.
ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಲು ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ದಿನದ 24 ಗಂಟೆ ವಿದ್ಯುತ್ ಹಾಗೂ ಎಲ್ಲ ಜಾಗದಲ್ಲೂ ಹೈಸ್ಪೀಡ್ ಇಂಟರ್ನೆಟ್ ಸಿಗುವ ಹಾಗೆ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪೆÇ್ರ.ಕೋಡದ ರಾಜಶೇಖರಪ್ಪ, ಡಾ.ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.




