
Udupi
ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು)ದ ವತಿಯಿಂದ ಪ್ರತಿಭಟನೆ
ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು)ನೇತೃತ್ವದಲ್ಲಿ ಇಂದು ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಯವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಮೀನುಗಾರರ ಸಂಘದ ಅಧ್ಯಕ್ಷರಾದ ಕೆ.ಶಂಕರ್, ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಕೋಣಿ,ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಸಮಿತಿ ಸದಸ್ಯರಾದ ಕವಿರಾಜ್. ಎಸ್.ಸಿಐಟಿಯು ಮುಖಂಡರಾದ ಮೋಹನ್, ಹಾಗೂ ಮೀನುಗಾರರ ಸಂಘದ ಮುಖಂಡರಾದ ಪ್ರಕಾಶ್,ವಸಂತ, ಅನ್ವರ್ ಹುಸೇನ್ ಕಟಪಾಡಿ,ಇಮ್ರಾನ್, ಬಶೀರ್,ಅಬುಬಕ್ಕರ್,ಅಬ್ದುಲ್ ಖಾದರ್,ಇಸ್ಮಾಯಿಲ್ ಉಪಸ್ಥಿತರಿದ್ದರು




