
Featured StoryState News
ಕರ್ನಾಟಕದಾದ್ಯಂತ ಶೀತಗಾಳಿ, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ
ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಗಳವಾರ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು.
ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.




