
ಬೆಳ್ಳಂಬೆಳಗ್ಗೆ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ
ಸಿದ್ದಾಪುರ: ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಯುವತಿಗೆ ಗಂಭೀರ ಗಾಯವಾಗಿದೆ.
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಎಸ್ಟೇಟ್ನಲ್ಲಿ ಕಾರ್ಮಿಕ ಮಂಜು ಅವರ ಪತ್ನಿ ಪಲ್ಲವಿ (28) ಕಾಫಿತೋಟದಲ್ಲಿ ಕೆಲಸಕೆ ತೆರಳುವ ಸಂದರ್ಭ ಎದುರಾದ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು ಹಣೆ,ಸೊಂಟ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯವಾಗಿದೆ.ತಕ್ಷಣ ಜೊತೆಯಲ್ಲಿ ಇದ್ದ ಕಾರ್ಮಿಕರು ಬೊಬ್ಬೆ ಹಾಕಿ ಆನೆಯನ್ನು ಓಡಿಸಿ ಯುವತಿಯನ್ನು ರಕ್ಷಿಸಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತ್ತು ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆ ಕಳುಹಿಸಲಾಗಿದ್ದು ಯುವತಿ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಕೆ.ಪಿ.ಸಿ.ಸಿ. ವಕ್ತಾರ ಸಂಕೇತ್ ಪೂವಯ್ಯ ಕಾರ್ಮಿಕ ಮಹಿಳೆಯ ಯೋಗಕ್ಷೇಮ ವಿಚಾರಿಸಿದರು. ನಂತರ ಮಾತನಾಡಿದ ಅವರು ಕಾಡಾನೆ ಹಾವಳಿ ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್ ಪೊನ್ನಣ್ಣನ ಈ ಕುರಿತು ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಡಾನೆ ಹಾವಳಿ ತಡೆಗಟ್ಟಲು ಶಾಶ್ವತ ಕ್ರಮಕ್ಕೆ ಮುಂದಾಗಲಿದ್ದಾರೆ ಎಂದರು.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಅರಣ್ಯ ರಕ್ಷಕ ಅರುಣ್,ಅರ್,ಅರ್,ಟಿ,ವಿನೋದ್ ಹಾಜರಿದ್ದರು
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




