BidarFeatured StoryState News

ಕನ್ನಡ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನಾ ರ್‍ಯಾಲಿ

ಬೀದರ್‌: ಕನ್ನಡ ಹೋರಾಟಗಾರರನ್ನು ಬಂಧಿಸಿರುವ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದರು. ಪಟ್ಟಣದ ಕನ್ನಡಾಂಬೆ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಘೋಷಣೆಗಳನ್ನು ಕೂಗುತ್ತ ರ್‍ಯಾಲಿ ನಡೆಸಿದರು.

ತಾಲ್ಲೂಕು ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೇ ಅವರು ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿದ್ದರು. ಇದೇ ವೇಳೆ ತಾಲ್ಲೂಕು ಆಧ್ಯಕ್ಷ ಅನಿಲ್ ಹೆಡೆ ಮಾತನಾಡಿ, ಬರುವ ಫೆಬ್ರುವರಿ 29ರೊಳಗೆ ನಗರದಲ್ಲಿ ಎಲ್ಲ ನಾಮಫಲಕಗಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಅಳವಡಿಸಬೇಕು. ಇಲ್ಲವಾದಲ್ಲಿ ಡಿ. 27ರಂದು ಬೆಂಗಳೂರಿನಲ್ಲಿ ನಡೆಸಿದ ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಮತ್ತು ಕನ್ನಡ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಬಂಧಿಸಲಾಗಿದೆ. ಕೂಡಲೇ ಅವರನ್ನೆಲ್ಲ ಬಿಡುಗಡೆಗೊಳಿಸಬೇಕು. ನೆಲ, ಜಲ, ಭಾಷೆ, ಸಂಸ್ಕೃತಿಯ ರಕ್ಷಣೆಗೆ ಹೋರಾಡುತ್ತಿರುವವರನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ಸರಿಯಲ್ಲ ಎಂದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button