
Climate and environmentFeatured Story
ಮುಂದಿನ 2 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಭಾರಿ ಮಳೆಯಾಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.




