
Dakshina Kannada
ಪ್ರೊ. ಅಮೃತ ಸೋಮೇಶ್ವರ ನಿಧನ
ಮಂಗಳೂರು: ಹಿರಿಯ ಸಾಹಿತಿ, ವಿದ್ವಾಂಸ, ಯಕ್ಷಗಾನ, ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 88 ವರ್ಷ ವಯಸ್ಸಾಗಿತ್ತು. ಕರಾವಳಿ ಕರ್ನಾಟಕದ ಯಕ್ಷಗಾನ, ಜಾನಪದ, ಭೂತಾರಾಧನೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಸಿದ ಇವರು, ನೂರಕ್ಕೂ ಹೆಚ್ಚು ಕೃತಿಯನ್ನು ಹೊರತಂದಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ,ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೨೦ ನೇ ಸಾಲಿನ “ಗೌರವಶ್ರೀ” ಪ್ರಶಸ್ತಿ, ಮಂಗಳೂರು ವಿವಿಯ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
ಅಮೃತ ಸೋಮೇಶ್ವರರು ಧರ್ಮ ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ ಹಾಗೂ ಸೃಷ್ಟಿ ಸೋಮೇಶ್ವರ ಅವರನ್ನ ಅಗಲಿದ್ದಾರೆ.




