
ಭಟ್ಕಳ: ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಈರ್ವರ ಬಂಧನ
ಕಾರವಾರ: ಭಟ್ಕಳದಲ್ಲಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಮೇಲೆ ಈರ್ವರು ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ 31 ರ ಮಧ್ಯರಾತ್ರಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವುದು ಹಾಸ್ಟೆಲ್ ನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಗುಂಪೊಂದು ಹಾಸ್ಟೆಲ್ ಮುಂದೆ ನಡೆದು ಹೋಗುತ್ತಿತ್ತು. ಆಗ ಹಾಸ್ಟೆಲ್ ವಿದ್ಯಾರ್ಥಿಗಳು ನಡೆದು ಹೋಗುವ ಗುಂಪನ್ನು ಚುಡಾಯಿಸಿದರು ಎನ್ನಲಾಗಿದೆ. ಇದರಿಂದ ಕುಪಿತರಾದ ಈರ್ವರು ಯುವಕರು ವಿದ್ಯಾರ್ಥಿಗಳ ಹಾಸ್ಟೆಲ್ ನುಗ್ಗಲು ಯತ್ನಿಸಿದ್ದಾರೆ. ಆಗ ವಿದ್ಯಾರ್ಥಿಗಳ ಹಾಸ್ಟೆಲ್ ಒಳಗೆ ಸೇರಿಕೊಂಡಿದ್ದಾರೆ. ಈ ವೇಳೆ ಕೈಗೆ ಸಿಕ್ಕ ನವೀದ್ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಇಬ್ಬರು ಥಳಿಸಿದ್ದಾರೆ.
ತೀವ್ರಗಾಯಗೊಂಡ ವಿದ್ಯಾರ್ಥಿಯನ್ನು ವಾರ್ಡನ್ ಮತ್ತು ಇತರೆ ವಿದ್ಯಾರ್ಥಿಗಳು ಆಸ್ಪತ್ರೆಗೆ ಸೇರಿಸಿದ್ದಾರೆ . ಘಟನೆ ಬಗ್ಗೆ ಹಾಸ್ಟೆಲ್ ವಾರ್ಡನ್ ನಾಗೇಂದ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಸಿಸಿ ಟಿವಿ ಪೂಟೆಜ್ ಆಧರಿಸಿ, ಪೊಲೀಸರು ರಾಘವೇಂದ್ರ ಯಾನೆ ಬಾಬು ನಾಯ್ಕ, ನಂದನ್ ಜೈನ್ ಎಂಬುವವರನ್ನು ಬಂಧಿಸಿ ತನಿಖೆಗೆ ಗುರಿಪಡಿಸಿದ್ದಾರೆ. ಭಟ್ಕಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




