Featured StoryState News

“ಕಾರವಾರದಲ್ಲಿ ವಾಕ್ ಅಂಡ್ ರನ್ ಕಾರ್ಯಕ್ರಮಕ್ಕೆ ಚಾಲನೆ “

ಯುವ ಜನತೆ ಉತ್ತಮ ಹವ್ಯಾಸ ರೂಡಿಸಿಕೊಳ್ಳಿ: ಉಪ ವಿಭಾಗಾಧಿಕಾರಿ ಕನಿಷ್ಕ

ಕಾರವರ: ಯುವ ಜನತೆ ಉತ್ತಮ ಮತ್ತು ಆರೋಗ್ಯಕರವಾದ ಹವ್ಯಾಸಗಳನ್ನು ರೂಡಿಸಿಕೊಳ್ಳುವುದರ ಮೂಲಕ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿದು ಮಾದಕ ವ್ಯಸನ ಮುಕ್ತ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಕರೆ ನೀಡಿದರು.

IMG 20240106 WA0074 Featured Story, State News

ಅವರು ಶನಿವಾರ, ರವೀಂದ್ರನಾಥ ಕಡಲ ತೀರದ ಮಯೂರ ವರ್ಮ ವೇದಿಕೆ ಬಳಿ, ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಡೆದ ಜಾಗೃತಿ ವಾಕ್ ಅಂಡ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ಕ್ಷಣಿಕ ಆನಂದ ದೊರೆತರೂ ದೈಹಿಕ ಮತ್ತು ಮನಸಿಕ ಆರೋಗ್ಯಕ್ಕೆ ಅತ್ಯಂತ ಹೆಚ್ಚು ದುಷ್ಪರಿಣಾಮ ಬೀರುತ್ತದೆ ಆದ್ದರಿಂದ ಯುವ ಜನತೆ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು, ಮಾದಕ ವಸ್ತುಗಳಿಂದ ದೂರವಿದ್ದು, ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ 1500 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಸುಮಾರು 4 ಕಿ.ಮೀ ಗೂ ಅಧಿಕ ವಾಕ್ ಅಂಡ್ ರನ್ ನಡೆಸಲಾಯಿತು. ಮಾದಕ ವಸ್ತು ಬಳಕೆ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ನಾಯಕ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button