
Dakshina KannadaFeatured Story
ಬಂಧಿಸಲು ಅಡ್ಡ ನಿಂತ ಪೊಲೀಸರ ಮೇಲೆಯೇ ಕಾರು ಹಾಯಿಸಿದ ರೌಡಿ ಶೀಟರ್
ಮಂಗಳೂರು: ಹಲವು ಪ್ರಕರಣದ ಆರೋಪಿ, ರೌಡಿಶೀಟರ್ ಆಕಾಶಭವನ್ ಶರಣ್‌ನನ್ನು ಪೊಲೀಸರು ಬಂಧಿಸಲು ಅಡ್ಡನಿಂತ ವೇಳೆ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆಕಾಶಭವನ ಶರಣ್ ಜ.2ರಂದು ರಾತ್ರಿ ನಗರದ ಮೇರಿಹಿಲ್ ಬಳಿ ಕಾರಿನಲ್ಲಿ ತೆರಳುತ್ತಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಪೊಲೀಸರು ಅಡ್ಡಗಟ್ಟಿ ನಿಲ್ಲಿಸಲು ಪ್ರಯತ್ನಿಸಿದ್ದರು. ಆ ವೇಳೆ ಆರೋಪಿ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲ್ಲಲು ಯತ್ನಿಸಿದ್ದು, ಪೊಲೀಸರು ಅಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಅತ್ಯಾಚಾರ, ಹಫ್ತಾ ವಸೂಲಿ ಸಹಿತ 21 ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.




