Kodagu

ಕೊಡಗು: ಜಿಲ್ಲೆಯ 5 ಸರ್ಕಾರಿ ಶಾಲೆಗಳು ಕೆಪಿಎಸ್ ಶಾಲೆಗಳಾಗಿ ಪರಿವರ್ತನೆ | ಸುಸಜ್ಜಿತ ವ್ಯವಸ್ಥೆಯೊಂದಿಗೆ ಮುಂದಿನ ವರ್ಷ ಅನುಷ್ಠಾನ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪೊನ್ನಂಪೇಟೆಯಲ್ಲಿ ಹೇಳಿಕೆ

ಕೊಡಗು ಜಿಲ್ಲೆಯಲ್ಲಿ ಐದು ಶಾಲೆಗಳನ್ನು ಮುಂದಿನ ವರುಷ ಉನ್ನತಿಕರಣಗೊಳಿಸಿ ಕೆಪಿಎಸ್ ಶಾಲೆಯಾಗಿ ಪರಿವರ್ತಿಸಲಾಗುವುದು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಪೊನ್ನಂಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಕೆಪಿಎಸ್ ಶಾಲೆಗಳಿಗೆ ಉತ್ತಮ ಗುಣಮಟ್ಟದ ಕಟ್ಟಡಗಳು, ಶಿಕ್ಷಕರು ಸಂಗೀತ ಶಿಕ್ಷಕರು ಹಾಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು. ಮಲೆನಾಡು ವಿಭಾಗಕ್ಕೆ ಹೆಚ್ಚು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಈ ಸಂದರ್ಭ ಹೇಳಿದರು. ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ ಖಾಯಂ ಶಿಕ್ಷಕರ ನೇಮಕಾತಿಯ ಬಗ್ಗೆ ನ್ಯಾಯಾಲಯದ ತೀರ್ಮಾನಕ್ಕೆ ಅನುಗುಣವಾಗಿ ನಡೆದುಕೊಳ್ಳಲಾಗುವುದು ಎಂದು ಮಧು ಬಂಗಾರಪ್ಪನವರು ಸ್ಪಷ್ಟಪಡಿಸಿದ್ದರು.

ಪೊನ್ನಂಪೇಟೆ ಯಲ್ಲಿ ನಡೆಯುತ್ತಿರುವ 67ನೇ ಬಾಲಕಿಯರ ರಾಷ್ಟ್ರೀಯ ಹಾಕಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಾಸಕರಾದ ಎ ಎಸ್ ಪೊನ್ನಣ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಸಚಿವರೊಂದಿಗಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button