
Bengaluru UrbanFeatured Story
ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಡಾ.ಜಿ. ಪರಮೇಶ್ವರ್ ಮಹತ್ವದ ಹೇಳಿಕೆ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಈವರೆಗೂ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನ್ನ ಹೆಸರು ಕೇಳಿ ಬಂದಿತ್ತು.ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕೇಳಿ ಬರುತ್ತಿದೆ. ಆದರೆ, ಎಲ್ಲಿಯೂ ಸ್ಪರ್ಧಿಸಬೇಕೆಂಬ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದರೆ ಅಧಿಕೃತವಾಗುತ್ತದೆ. ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು, ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಮುಖ ನಾಯಕರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.




