ಕುಂದಾಪುರ: ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ – ಮಹಿಳೆ ಮೃತ್ಯು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ಪಶ್ಚಿಮ ಬದಿಯ ಸರ್ವಿಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿರುವಾಗ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಬೀಜಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ಪಶ್ಚಿಮ ಬದಿಯ ಸರ್ವಿಸ್ ರಸ್ತೆಯಲ್ಲಿ ಕಮಲ ಎಂಬುವವರು ಸರ್ವಿಸ್ ರಸ್ತೆಯನ್ನು ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದರು.

ನಂತರ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 05/2024 ಕಲಂ: 279, 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

Latest Indian news

Popular Stories