
Dakshina KannadaFeatured Story
ಮಂಗಳೂರು: ಗುಂಡು ಹಾರಿಸಿ ನಟೋರಿಯಸ್ ರೌಡಿಯ ಬಂಧನ
ಮಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಆಕಾಶಭವನ ಶರಣ್ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ಶೂಟೌಟ್ ನಡೆಸಿದ್ದಾರೆ.
ನಗರದ ಜಪ್ಪು ಕುಡ್ಪಾಡಿ ಬಳಿ ಪೊಲೀಸರು ಫೈರಿಂಗ್ ನಡೆಸಿ ಆತನನ್ನು ಬಂಧಿಸಿದ್ದಾರೆ.
ಜನವರಿ 2ರಂದು ಈತನನ್ನು ಬಂಧಿಸಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ.
ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಅತ್ಯಾಚಾರ, ಹಫ್ತಾ ವಸೂಲಿ ಸಹಿತ 21 ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಷ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ.




