Bidar

ಜ.15 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವ ಕಾರ್ಯಕ್ರಮ

ಬೀದರ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೀದರ  ಇವರ ಸಂಯುಕ್ತಾಶ್ರಯದಲ್ಲಿ ಜನವರಿ 15 ರಂದು ಮಧ್ಯಾಹ್ನ 1 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರ ಬೀದರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿ ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಹ ಸಚಿವರಾದ ಭಗವಂತ ಖೂಬಾ ವಹಿಸಲಿದ್ದಾರೆ. ಹಾಗೂ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ರಘುನಾಥರಾವ ಮಲ್ಕಾಪೂರೆ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ ಹಾಗೂ ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ ಮತ್ತು ಬೀದರ ಅಕ್ಕಮಹಾದೇವಿ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ಶಿವಶರಣಪ್ಪಾ ಹುಗ್ಗಿ ಪಾಟೀಲ ಅವರು ಅತಿಥಿ ಉಪನ್ಯಾಸ ನೀಡಲಿದ್ದಾರೆ.

ಬೆಳಿಗ್ಗೆ 9.30 ಗಂಟೆಗೆ ಸರಕಾರಿ, ಅರೆ ಸರಕಾರಿ ಮತ್ತು ಸಂಘ ಸಂಸ್ಥೆಗಳುತಮ್ಮ ತಮ್ಮ ಕಚೇರಿಗಳಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು. ಬೆಳಿಗ್ಗೆ 10 ಗಂಟೆಗೆ ಎಲ್ಲಾ ಸರಕಾರಿ ಹಾಗೂ ಅರೆ ಸರಕಾರಿ ನೌಕರರು, ಸಮಾಜದ ಮುಖಂಡರು ಮತ್ತು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸೇರುವುದು. ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರವರ ಭಾವಚಿತ್ರಕ್ಕೆ ಪೂಜೆ, ಮಾರ್ಲಾಪಣೆ ಹಾಗೂ ಮೆರವಣಿಗೆ ಚಾಲನೆ.

ಬೆಳಿಗ್ಗೆ 10.45 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ವಿಶ್ವಗುರು ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ನೇರವಾಗಿ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರ, ಬೀದರದಲ್ಲಿ ಸೇರುವುದು. ಮಧ್ಯಾಹ್ನ 1 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button