Featured StoryUdupi

ಬೈಂದೂರು | ಸಹಾಯ ಮಾಡುವ ನೆಪದಲ್ಲಿ ಗ್ರಾಹಕರಿಗೆ ವಂಚನೆ: ಎಟಿಎಂನಿಂದ ಹಣ ಎಗರಿಸಿದ ಕಳ್ಳರ ಸೆರೆ

ಬೈಂದೂರು: ಎಟಿಎಂನಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್‌ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳಲ್ಲಿ ಹರಿಯಾಣ ಮೂಲದ ಇಬ್ಬರು ಕಳ್ಳರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬಲ್ಕಿಸ್‌ ಬಾನು, ಚೈತ್ರಾ ಮತ್ತು ಚಂದ್ರಶೇಖರ ಹಣ ಕಳೆದುಕೊಂಡವರು. ಹರಿಯಾಣದ ಸಂದೀಪ ಹಾಗೂ ರವಿ ಬಂಧಿತರು. ಎಟಿಎಂನಿಂದ ಹಣ ತೆಗೆಯಲು ಸಮಸ್ಯೆ ಎದುರಿಸಿದ ಗ್ರಾಹಕರನ್ನು ಕಳ್ಳರು ಗುರಿಯಾಗಿಸಿಕೊಂಡಿದ್ದರು.

ಮೂರು ಪ್ರಕರಣದಲ್ಲಿ ಗ್ರಾಹಕರನ್ನು ವಂಚಿಸಿ ಹಣ ಎಗರಿಸಿದ ಕುರಿತು ಪ್ರತ್ಯೇಕ ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button