Featured StoryState News

ನೈತಿಕ ಪೊಲೀಸ್’ಗಿರಿ ಖಂಡನೀಯ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಹಾವೇರಿಯ ನೈತಿಕ ಪೊಲೀಸ್’ಗಿರಿ ಪ್ರಕರಣ ಇದೀಗ ಬಿಜೆಪಿಯನ್ನು ಬಡಿದೆಬ್ಬಿಸಿದೆ. ಕ್ರಿಯೆಗೆ ಪ್ರಕ್ರಿಯೆ ಎಂಬ ಹೇಳಿಕೆಯ ಮುಖಾಂತರ ವಿವಾದ ಸೃಷ್ಟಿಸಿದ್ದ ಬಸವರಾಜ್ ಬೊಮ್ಮಾಯಿ ಇದೀಗ ನೈತಿಕ ಪೊಲೀಸ್ ಗಿರಿ ವಿರುದ್ಧ ಮಾತನಾಡಿದ್ದಾರೆ‌

“ನೈತಿಕ ಪೊಲೀಸ್‌ಗಿರಿ ಖಂಡನೀಯ. ಯುವತಿ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಪುಂಡರು ರಾಜಾರೋಷವಾಗಿ ನೈತಿಕ ಪೊಲೀಸ್‌ಗಿರಿ ಮಾಡಲು ಬಿಟ್ಟಿರುವುದನ್ನು ನೋಡಿದರೆ ರಾಜ್ಯದಲ್ಲಿ ಸರಕಾರ ಜೀವಂತ ಇದೆಯೋ ಇಲ್ಲವೋ ಎಂಬ ಸಂಶಯ ಮೂಡಿದೆ.” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button