Uttara Kannada

ಉತ್ತರ ಕನ್ನಡ ಸಂಸದರ ಹೇಳಿಕೆ ಬೇಜಾಬ್ದಾರಿತನದ್ದು : ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ

ಕಾರವಾರ :ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕುರಿತು ಸಂಸದ ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ಬೇಜಾಬ್ದಾರಿತನದಿಂದ ಕೂಡಿದೆ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
ಭಾನುವಾರ ಹಳಿಯಾಳದಲ್ಲಿನ ಅವರ ಗೃಹ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಅನಂತ ಕುಮಾರ್ ಹೆಗಡೆ ಅವರು ತಮ್ಮ ಇತಿಮಿತಿಯಲ್ಲಿ ಮಾತನಾಡಬೇಕು. ಬೇಜವಾಬ್ದಾರಿತನದ ಹೇಳಿಕೆಯಿಂದ ಮತದಾರರ ಮನಸ್ಸು ಗೆಲ್ಲಲು ಸಾಧ್ಯವಿಲ್ಲ ಎಂದರು.
ರಾಮ ಮಂದಿರ ಕುರಿತು ರಾಜಕೀಯ ಮಾಡುವುದು ವಿಷಾಧನೀಯ. ನಾನು ರಾಮಭಕ್ತ, ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ರಾಮನ ಆಶೀರ್ವಾದದಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆದರೆ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ವಿಷಾಧನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷ, ಸಂಘಟನೆ ಹಾಗೂ ಅದರ ವ್ಯಕ್ತಿಗಳು ರಾಮಮಂದಿರ ವಿಚಾರದಲ್ಲಿ ಭಾಗಿಯಾಗುತ್ತಿರುವುದು ಸರಿಯಲ್ಲ. ಇದು ದೇಶದ ಎಲ್ಲ ಜನರ ಕೊಡುಗೆಯಾಗಿದೆ.
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ರಾಮಮಂದಿರದ ಬೀಗ ತೆರೆದಿದ್ದರು. ಆದರೆ ನಾವು ರಾಮನ ಹೆಸರಿನಲ್ಲಿ ರಾಜಕೀಯ ಮಾಡಲಿಲ್ಲ ಎಂದರು.

…..

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button