Featured StoryState News

ಸಂಸದ ಅನಂತ್ ಕುಮಾರ್ ಹೆಗಡೆ ಅಸಭ್ಯ ಮಾತು | ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿದೆ – ಕಾಂಗ್ರೆಸ್

ಬೆಂಗಳೂರು: ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (BJP MP Ananth Kumar Hegde) ವಿರುದ್ಧ ಕಾಂಗ್ರೆಸ್ (Congress) ಸಮರವೇ ಸಾರಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಏಕವಚನದಲ್ಲಿಯೇ ಅನಂತಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸಚಿವರು ತಿರುಗೇಟು ನೀಡುತ್ತಿದ್ದಾರೆ. ಮಾಜಿ ಸಚಿವ ವಿ.ಸೋಮಣ್ಣ (Former Minister V Somanna) ಸಹ ನಯವಾಗಿಯೇ ತಮ್ಮ ಸಂಸದರ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿಯೂ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸಂಸದ ಅನಂತ್ ಕುಮಾರ್ ಹೆಗಡೆ ಕುಂಭಕರ್ಣನಿದ್ದಂಗೆ, ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು. ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಪಕ್ಷದ ಬಗ್ಗೆ ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಕಾಂಗ್ರೆಸ್ ಎಕ್ಸ್ x ಖಾತೆಯಲ್ಲಿ ಬರೆದುಕೊಂಡಿದೆ.

ಸಿದ್ದರಾಮಯ್ಯ ಏನು ಮಾತಾಡ್ತಾರೆ ಅನ್ನೋದು ಅವರ ವಿವೇಚನೆಗೆ ಬಿಟ್ಟಿದ್ದು. ಅನಂತ್ ಕುಮಾರ್ ಹೆಗಡೆ ಸುಸಂಸ್ಕೃತ ಕುಟುಂಬದಿಂದ ಬಂದವರು. ನಾವು ನಮ್ಮ ಭಾಷೆ ಹಿಡಿತದಲ್ಲಿ ಇಟ್ಕೋಬೇಕಾಗುತ್ತದೆ. ಅನಂತ್ ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕವಾಗಿ ನನಗೆ ಸ್ವಲ್ಪ ಬೇಸರಿಕೆ ತರಿಸಿದೆ ಎಂದು ವಿ.ಸೋಮಣ್ಣ ಅಸಮಾಧಾನ ಹೊರ ಹಾಕಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button