Crime
ಅ.15 ಕ್ಕೆ ಶಾಲೆಗಳು ಆರಂಭ: ರಾಜ್ಯ ಸರ್ಕಾರದ ಮಾರ್ಗಸೂಚಿ ಇಲ್ಲಿದೆ ನೋಡಿ
ಬೆಂಗಳೂರು, ಅ 2(ಯುಎನ್ಐ):- ಅಕ್ಟೋಬರ್ 15 ರ ನಂತರ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಿ ಪಾಠ, ಪ್ರವಚನ ಕೇಳುವ ಅಥವಾ ಆನ್ ಲೈನ್ ಶಿಕ್ಷಣ ಪೈಕಿ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಶಾಲೆಗಳಿಗೆ ಹಾಜರಾಗಲೇಬೇಕು ಎಂದು ಕಡ್ಡಾಯ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಅನ್ವಯ, ರಾಜ್ಯದ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.
ಈ ಕುರಿತು ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್ ಡೌನ್ ಅವಧಿಯನ್ನು ಅಕ್ಟೋಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ




