Crime

ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್ !

ಯಾದಗಿರಿ,ಫೆ.,22:- ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನ್ನು ವಶಕ್ಕೆ ಪಡೆಯಲಾಗಿದೆ.
ಜಮೀನು ಪಾಲು ವಿಚಾರಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಎಂಬುವವರಿಂದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ, ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button