
Crime
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೋಲಿಸ್ರ ವಶಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಬಂಧನ
ಕಲಬುರಗಿ, ಅ.2(ಯುಎನ್ಐ):- ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ಯುವತಿ ಸಾವು ಘಟನೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೋಲಿಸ್ರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಪೋಲಿಸ್ರು ಪ್ರತಿಭಟನನಿರತ 25ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.
ನಗರದ ಟೌನ್ ಹಾಲ್ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.




