
Crime
ಚಿಕ್ಕಬಳ್ಳಾಪುರ ಸ್ಫೋಟ, ಉನ್ನತ ತನಿಖೆಗೆ ಆದೇಶಿಸಿದ ಮುಖ್ಯಮಂತ್ರಿ
ಬೆಂಗಳೂರು,ಫೆ.23:- ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಬಗ್ಗೆ ಉನ್ನತ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಟ್ವೀಟ್ನಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಬಿಎಎಸ್ವೈ, ಮೃತರ ಕುಟುಂಬದವರಿಗೆ ದುಃಖಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.




